ಅಸ್ಸಾಂ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಬಿಜೆಪಿ ನೇತೃತ್ವದ ಅಸ್ಸಾಂ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ಈ ಯೋಜನೆಯಂತೆ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿನಿಗೂ ದಿನಕ್ಕೆ ₹100 ಪ್ರೋತ್ಸಾಹ ಧನ ದೊರೆಯಲಿದೆ ಎಂದು ಅಸ್ಸಾಂನ ಶಿಕ್ಷಣ ಸಚಿವ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.
ಪ್ರಸ್ತುತ, ಪ್ರಗ್ಯಾನ್ ಭಾರತಿ ಯೋಜನೆಯಡಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ 22 ಸಾವಿರ ದ್ವಿಚಕ್ರ ವಾಹನಗಳನ್ನು ಅಸ್ಸಾಂ ಸರ್ಕಾರ ವಿತರಿಸಿದೆ.