ಬೆಂಗಳೂರು: ಖ್ಯಾತ ಸಜನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ (90ವರ್ಷ) ಅವರು ಇಂದು (ಡಿಸೆಂಬರ್ 23, 2024) ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಸಂತಾಪ ಸೂಚಿಸಿದ್ದಾರೆ.
ಖ್ಯಾತ ಬಾಲಿವುಡ್ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 6:30ಕ್ಕೆ ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಂತಾಪ ಸಂದೇಶ
ಭಾರತೀಯ ಸಿನಿಮಾ ನಿರ್ದೇಶನದ ವಿಶಿಷ್ಟ ಸಾಧಕ ಶ್ಯಾಮ್ ಬೆನಗಲ್ ಅವರ ನಿಧನದಿಂದಾಗಿ, ಒಬ್ಬ ಸೃಜನಶೀಲ ಕಲಾವಿದರ ಅಂತ್ಯವಾಗಿದೆ. ನಾನು ಅವರ ಸ್ಮೃತಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬ ಮತ್ತು ಪ್ರಿಯಜನರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ಆತ್ಮಕ್ಕೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥನೆ.
– ದತ್ತಾತ್ರೇಯ ಹೊಸಬಾಳೆ
ಸರಕಾರ್ಯವಾಹ
ರಾಷ್ಟ್ರೀಯ ಸ್ವಯಂಸೇವಕ ಸಂಘ