ಮೈಸೂರು: ಮೈಸೂರು ಸಿನಿಮಾ ಸೊಸೈಟಿ ಮತ್ತು ಭಾರತೀಯ ಚಿತ್ರ ಸಾಧನದ ಸಹಯೋಗದೊಂದಿಗೆ ‘ಪರಿದೃಶ್ಯ’ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಫೆಬ್ರವರಿ 1 ಮತ್ತು 2ನೇ ತಾರೀಖಿನಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ನಡೆಯಲಿದೆ. ಉದ್ಘಾಟನೆಯಲ್ಲಿ ಖ್ಯಾತ ನಟ, ನಿರ್ದೇಶಕ ಪ್ರಕಾಶ್ ಬೆಳವಾಡಿ, ಬರಹಗಾರ ಮನೇಕ್ ಪ್ರೇಮಚಂದ್ ಮತ್ತು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಶರಣಪ್ಪ ಹಲಸೆಯವರು ನೆರವೇರಿಸಿಕೊಡಲಿದ್ದಾರೆ.ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಡಾ.ಎಲ್ .ಮುರುಗನ್ ಅವರು ಉಪಸ್ಥಿತರಿರುತ್ತಾರೆ.
ಪರಿದೃಶ್ಯ ಚಿತ್ರೋತ್ಸವಕ್ಕೆ ಪ್ರಪಂಚದಾದ್ಯಂತ 109 ದೇಶಗಳಿಂದ 3123 ಕಿರು ಮತ್ತು ಸಾಕ್ಷ್ಯಚಿತ್ರಗಳು ಬಂದಿವೆ. ಈ ಚಿತ್ರಗಳಲ್ಲಿ ಆಯ್ಕೆಯಾದ ಸಿನಿಮಾಗಳಿಗೆ 26 ವರ್ಗಗಳ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಭಾರತದಿಂದ 985, ಇರಾನ್ ಇಂದ 413, ಸ್ಪೇನ್ ಇಂದ 138, ಫ್ರಾನ್ಸ್ 137, ಬ್ರೆಜಿಲ್ 108, ಚೀನಾ 99, ಇಂಡೋನೇಷಿಯಾ 91, ಟರ್ಕಿ 88, USA 82, ಇಟಲಿ 81 ಮುಂತಾದ ದೇಶಗಳಿಂದ 3123 ಸಿನಿಮಾಗಳು ಬಂದಿವೆ. ಕನ್ನಡದ ಒಟ್ಟು 73 ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಸೇರಿವೆ.
‘ಪರಿದೃಶ್ಯ’ 2025ರ ವಿಶೇಷತೆ:
ಈ ಬಾರಿಯ ಪರಿದೃಶ್ಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಅಭಿನಯಿಸಿದ ಗಂಧದಗುಡಿ ಚಲನಚಿತ್ರ ಸೇರಿದಂತೆ ಹಲವು ಭಾಷೆಗಳ ವಿವಿಧ ಕಿರುಚಿತ್ರಗಳು ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ಇರುತ್ತದೆ. ಜೊತೆಗೆ ಸಿನೆಮಾ ರಂಗದ ಖ್ಯಾತನಾಮರಿಂದ ಹಲವು ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಹಾಗೆಯೇ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಸಜ್ಜಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಚೇತನ್ – +91 9980596824
ಪರಿದೃಶ್ಯ ಚಿತ್ರೋತ್ಸವದ ವೇಳಾಪಟ್ಟಿ: