ವಿಶಾಖಪಟ್ಟಣಂ, ಆಗಸ್ಟ್ 19, 2026: ರಾಷ್ಟ್ರೀಯ ಸ್ವಯಂಸೇವಕ ಸಂಘದ “ಅಖಿಲ ಭಾರತೀಯ ಸಮನ್ವಯ ಬೈಠಕ್” ಇಂದು ಬೆಳಿಗ್ಗೆ ವಿಶಾಖಪಟ್ಟಣಂ ಬಳಿಯ ಗುಡಿಲೋವಾಡ “ವಿಜ್ಞಾನ ವಿಹಾರ್” ಶಾಲೆಯಲ್ಲಿ ಪ್ರಾರಂಭವಾಯಿತು. ಸಭೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಬೈಠಕ್ ಆಗಸ್ಟ್ 21 ರ ಸಂಜೆಯವರೆಗೆ ಮುಂದುವರಿಯುತ್ತದೆ.

ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಎಲ್ಲಾ ಸಹಸರಕಾರ್ಯವಾಹರು ಮತ್ತು ಇತರ ಕೇಂದ್ರ ಅಧಿಕಾರಿಗಳು ಪ್ರತಿ ವರ್ಷ ನಡೆಯುವ ಈ ಅಖಿಲ ಭಾರತೀಯ ಸಮನ್ವಯ ಸಭೆಯಲ್ಲಿ ಉಪಸ್ಥಿತರಿರುತ್ತಾರೆ.
ಬೈಠಕ್ ನಲ್ಲಿ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿಗಳು ಮತ್ತು ಭಾರತೀಯ ಮಜ್ದೂರ್ ಸಂಘ, ವಿಶ್ವ ಹಿಂದೂ ಪರಿಷತ್, ಭಾರತೀಯ ಜನತಾ ಪಕ್ಷ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಭಾರತೀಯ ಕಿಸಾನ್ ಸಂಘ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ಇತರ ಕೆಲವು ಆಯ್ದ ಕಾರ್ಯಕರ್ತರು ಸಮನ್ವಯ ಸಭೆಯಲ್ಲಿ ಭಾಗವಹಿಸಿದ್ದಾರೆ. ವಿವಿಧ ಸಂಘಟನೆಗಳ 49 ಮಹಿಳೆಯರು ಸೇರಿದಂತೆ ಒಟ್ಟು 253 ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಂಘದ ಪದಾಧಿಕಾರಿಗಳು, ಪ್ರತಿನಿಧಿಗಳು ಸೇರಿದಂತೆ ಒಟ್ಟು 327 ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.