ಮೈಸೂರು: ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜೂನ್ 8 ಮತ್ತು 9 ರಂದು ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹುದ್ದೂರ್ ಆಡಿಟೋರಿಯಂನಲ್ಲಿ ನಡೆಯಿತು. ದೇಶಾದ್ಯಾಂತದಿಂದ ಸುಮಾರು 180ಕ್ಕೂ ಹೆಚ್ಚು ಜನ ಪ್ರತಿನಿಧಿಗಳು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಅಧಿವಕ್ತಾ ಪರಿಷತ್ ನ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಸರ್ವೋಚ್ಚ ನ್ಯಾಯಾಲಯದ ವಕೀಲ ಭರತ್ ಉದ್ಘಾಟಿಸಿದರು. ಸಮಾರೋಪ ಸಮಾರಂಭದಲ್ಲಿ ಅಧಿವಕ್ತಾ ಪರಿಷತ್ ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಶ್ರೀನಿವಾಸಮೂರ್ತಿ ಅವರು ಭಾಗವಹಿಸಿದರು. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಪ್ರಭು ಶ್ರೀ ರಾಮಲಲಾನ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಅರುಣ್ ಯೋಗಿರಾಜ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ಕ್ಷೇತ್ರಿಯ ಪದಾಧಿಕಾರಿಗಳು, ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.