
ಕುಮಟಾ: ಕಾರವಾರ ಜಿಲ್ಲೆಯ ದೇವಾಲಯಗಳ ಸಮಿತಿಯ ಪದಾಧಿಕಾರಿಗಳ ಚಿಂತನಾ ಸಭೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಪ್ರಾರ್ಥನಾ ಮಂದಿರದಲ್ಲಿ ಜರುಗಿತು. ಸುಮಾರು 325 ಕ್ಕೂ ಹೆಚ್ಚು ಮಂದಿ ದೇವಸ್ಥಾನದ ಪದಾಧಿಕಾರಿಗಳು ಮತ್ತು ಮಾತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡದ ಪೂಜಾರಿ ಎಂದೇ ಖ್ಯಾತರಾದ ಹಿರೇಮಗಳೂರು ಕಣ್ಣನ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ದೇವಾಲಯಗಳ ಕೆಲವು ಪ್ರಮುಖರು ತಮ್ಮ ದೇವಾಲಯಗಳು ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಪ್ರಾಂತ ಪ್ರಚಾರಕ ನರೇಂದ್ರ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಿರಸಿ ವಿಭಾಗ ಮಾನ್ಯ ಸಂಘಚಾಲಕರಾದ ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು
,