ಬೆಂಗಳೂರು: ಜುಲೈ 24ರಂದು ದೈವಾಧೀನರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಮದನ್ ದಾಸ್ ದೇವಿ ಅವರ ಅಂತಿಮ ದರ್ಶನವನ್ನು ಅನೇಕ ಮಂದಿ ಗಣ್ಯರು ಪಡೆದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಹಸರಕಾರ್ಯವಾಹ ಸಿ.ಆರ್.ಮುಕುಂದ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಹಿರಿಯ ರಾಜಕಾರಣಿ ಪಿ.ಜಿ.ಆರ್ ಸಿಂಧಿಯಾ, ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಸೇತು ಮಾಧವನ್, ಪರ್ಯಾವರಣ್ ಸಂರಕ್ಷಣೆ ಗತಿವಿಧಿಯ ಅಖಿಲ ಭಾರತೀಯ ಸಂಯೋಜಕ ಗೋಪಾಲ ಆರ್ಯನ್, ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಕಾರ್ಯದರ್ಶಿ ಸ್ಥಾಣುಮಾಲಯನ್, ಹಿರಿಯ ಸಾಮಾಜಿಕ ಕಾರ್ಯಕರ್ತ ವೈ.ಕೆ.ರಾಘವೇಂದ್ರ ರಾವ್, ಎಬಿವಿಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಪ್ರಫುಲ್ಲ ಆಕಾಂತ್, ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ಶ್ರೀಧರ್, ರಾಷ್ಟ್ರೋತ್ಥಾನ ಪರಿಷತ್ ನ ಅಧ್ಯಕ್ಷ ಎಂ.ಪಿ.ಕುಮಾರ್, ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗಡೆ, ಕೆಪಿಸಿಸಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಹಾಗೂ ರಾಜಕೀಯ ಚಿಂತಕ ಪ್ರೊ. ಕೆ.ಇ.ರಾಧಾಕೃಷ್ಣ, ಮಾಜಿ ಶಿಕ್ಷಣ ಸಚಿವ ಮತ್ತು ಶಾಸಕ ಸುರೇಶ್ ಕುಮಾರ್, ಮಾಜಿ ಉನ್ನತ ಶಿಕ್ಷಣ ಸಚಿವ ಮತ್ತು ಶಾಸಕ ಅಶ್ವತ್ಥ್ ನಾರಾಯಣ್, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಕಾರ್ಯವಾಹ ಜಯಪ್ರಕಾಶ್ ಬೆಂಗಳೂರಿನಲ್ಲಿರುವ ಸಂಘ ಕಾರ್ಯಾಲಯ ಕೇಶವಕೃಪಾದಲ್ಲಿ ಅಂತಿಮ ದರ್ಶನ ಪಡೆದರು.