ಪತ್ರಿಕಾ ಹೇಳಿಕೆ
ಈ ದಿನ ಫ್ರೀಡಮ್ ಪಾರ್ಕ್ ಬಳಿ ನಡೆದ ಸಾರ್ವಜನಿಕ ಕಾರ್ಯಕ್ರಮ ವೊಂದನ್ನು ವರದಿ ಮಾಡಲು ತೆರಳಿದ್ದ, ಪತ್ರಕರ್ತರೊಬ್ಬರನ್ನು, ಅಮಾನುಷವಾಗಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸುತ್ತೇನೆ.
ಪ್ರಜಾಪ್ರಭುತ್ವ ಹಾಗೂ ಪತ್ರಿಕಾ ಸ್ವಾತಂತ್ರ್ಯ ವಿರೋಧಿ ಮನಸ್ಥಿತಿಯ ವ್ಯಕ್ತಿ ಗಳ ಕುಮ್ಮಕ್ಕಿನಿಂದ ನಡೆದ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು, ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಹಲ್ಲೆ ಸಂಬಂಧ ಮೊಕದ್ದಮೆ ದಾಖಲಾಗಿದ್ದು, ಹಲ್ಲೆಗೆ ಕಾರಣರಾದವರನ್ನು ಆದಷ್ಟು ಬೇಗ ಗುರುತಿಸಿ ಕಾನೂನು ಕಕ್ಷೆಗೆ ಒಳಪಡಿಸುವಂತೆ ನಿರ್ದೇಶಿಸಿದ್ದೇನೆ.
ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
ಬೆಂಗಳೂರು. ಜೂನ್ 18.
ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಹಂಚಿಕೊಂಡಿರುವ ಸಚಿವರು ಕಾನೂನು ಕ್ರಮ ಜರುಗಿಸಲು ಸೂಚಿಸಿದ್ದಾರೆ.