ಮಹಿಳೆಯರು ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಇಂದು ಜಾಗತಿಕ ಮನ್ನಣೆ ಪಡೆಯುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಸಲುವಾಗಿ ಪ್ರತಿವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಶ್ವಸಂಸ್ಥೆಯ ವತಿಯಿಂದ ಆಚರಿಸಲಾಗುತ್ತದೆ. ‘ಮಹಿಳೆಯರಿಗಾಗಿ ಹೂಡಿಕೆ ಮಾಡಿ: ಪ್ರಗತಿಯನ್ನು ವೇಗಗೊಳಿಸಿ’ ಎಂಬುದು ಈ ವರ್ಷದ ಥೀಮ್ ಆಗಿದೆ.


ಇತಿಹಾಸ
ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಯೂರೋಪ್‌ ಹಾಗೂ ಉತ್ತರ ಅಮೇರಿಕಾ ದೇಶಗಳಲ್ಲಿ ನಡೆದ ಕಾರ್ಮಿಕ ಚಳವಳಿಯು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹುಟ್ಟಿಗೆ ಕಾರಣವಾಯಿತು. ನ್ಯೂಯಾರ್ಕ್‌ನಲ್ಲಿ 1908ರ ಗಾರ್ಮೆಂಟ್ಸ್ ಕಾರ್ಮಿಕರ ಮುಷ್ಕರದ ನೆನಪಿಗಾಗಿ ಅಮೆರಿಕಾದಲ್ಲಿ ಮೊದಲ ರಾಷ್ಟ್ರೀಯ ಮಹಿಳಾ ದಿನವನ್ನು ಫೆಬ್ರವರಿ 28, 1909 ರಂದು ಆಚರಿಸಲಾಯಿತು. 1911 ರಲ್ಲಿ ಡೆನ್ಮಾರ್ಕ್‌, ಆಸ್ಟ್ರೀಯ, ಜಮರ್ನಿ, ಸ್ವಜರ್‌ಲ್ಯಾಂಡ್ ದೇಶಗಳಲ್ಲಿ ದಶಲಕ್ಷಗಟ್ಟಲೇ ಜನರು ಒಂದು ಕಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲು ಆರಂಭಿಸಿದರು. 1945 ರಲ್ಲಿ ವಿಶ್ವಸಂಸ್ಥೆಯು ಪುರುಷರು ಮತ್ತು ಮಹಿಳೆಯರ ನಡುವಿನ ಸಮಾನತೆಯ ತತ್ವವನ್ನು ದೃಢೀಕರಿಸುವ ಮೊದಲ ಅಂತರರಾಷ್ಟ್ರೀಯ ಒಪ್ಪಂದಕ್ಕೆ ಸಾಕ್ಷಿಯಾಯಿತು. ಇದರ ನಂತರ, ಮಾರ್ಚ್ 8, 1975 ರಂದು, ಅಂತರರಾಷ್ಟ್ರೀಯ ಮಹಿಳಾ ವರ್ಷದಲ್ಲಿ, ವಿಶ್ವಸಂಸ್ಥೆಯು ತನ್ನ ಮೊದಲ ಅಧಿಕೃತ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು. ನಂತರ 1977 ರಲ್ಲಿ ಯು ಎನ್‌ ಜನರಲ್ ಅಸೆಂಬ್ಲಿಯು ಮಹಿಳೆಯರ ಹಕ್ಕುಗಳ ಮತ್ತು ಜಾಗತಿಕ ಶಾಂತಿಯನ್ನು ಬೆಂಬಲಿಸಲು ಮಾರ್ಚ್‌ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಣೆ ಮಾಡಿತು. ಅಂದಿನಿಂದ ಪ್ರತಿ ವರ್ಷ ಮಾರ್ಚ್‌ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ಮಹತ್ವ
ಲಿಂಗ ಸಮಾನತೆ, ಮಹಿಳೆಯರ ಸಾಧನೆಗಳನ್ನು ಗೌರವಿಸುವುದು ಮತ್ತು ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹಿಸುವುದು ಮುಖ್ಯ ಉದ್ದೇಶವಾಗಿದೆ. ಸುಸ್ಥಿರ ಅಭಿವೃದ್ಧಿ, ಶಾಂತಿ, ಸುರಕ್ಷತೆ, ಸಾಕ್ಷರತೆ ಸಾಧಿಸಲು ಮಹಿಳೆಯರ ಭಾಗಿತ್ವವನ್ನು ಉತ್ತೇಜಿಸಲು ಹಲವು ವರ್ಷಗಳಿಂದ ವಿಶ್ವಸಂಸ್ಥೆ ಹಾಗೂ ಅದರ ಅಂಗ ಸಂಸ್ಥೆಗಳು ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.