ಪುಣೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು, ವಿಜ್ಞಾನ ಭಾರತಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಜಯಂತ ಸಹಸ್ರಬುದ್ಧೆ ವಿಧಿವಶರಾಗಿದ್ದಾರೆ.
ಘಾಜಿಯಾಬಾದ್ ನಲ್ಲಿ ಕಾರು ಅಪಘಾತಕ್ಕೆ ಒಳಗಾಗಿ ಕಳೆದ ಸೆಪ್ಟೆಂಬರ್ ನಿಂದ ಚಿಕಿತ್ಸೆ ಪಡೆಯುತ್ತಿದ್ದ ಇವರು ಜೂನ್ 2ರಂದು ಚಿಕಿತ್ಸೆ ಫಲಕಾರಿಯಾಗದೆ ಪುಣೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1989ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿ, 2010ರಿಂದ ವಿಜ್ಞಾನ ಭಾರತಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆಜಾದಿ ಕಾ ಅಮೃತ ಮಹೋತ್ಸವದ ಪರ್ವ ಕಾಲದಲ್ಲಿ ರಾಷ್ಟ್ರಾದ್ಯಂತ ‘ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯ ವಿಜ್ಞಾನಿಗಳ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸಗಳನ್ನು ನೀಡಿದ್ದರು. ಇಂಡಿಯಾ ಇಂಟರ್ ನ್ಯಾಶನಲ್ ಸೈನ್ಸ್ ಫೆಸ್ಟಿವಲ್, ವರ್ಲ್ಡ್ ಆಯುರ್ವೇದ ಕಾಂಗ್ರೆಸ್, ಭಾರತೀಯ ವಿಜ್ಞಾನ ಸಮ್ಮೇಳನಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಜಯಂತ್ ಸಹಸ್ರಬುದ್ಧೆ ಅವರ ಅಗಲಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ವಿಜ್ಞಾನ ಭಾರತಿಯ ಎಲ್ಲಾ ಸದಸ್ಯರು ಮತ್ತು ಹಿತೈಶಿಗಳು ಸೇರಿದಂತೆ ಗಣ್ಯರನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.