ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರ ನಿರ್ಮಾಣದ ಉಪಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ‌‌ ಇದುವರೆಗೂ ಇದ್ದ ನಿರ್ಬಂಧವನ್ನು ಮುಕ್ತಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾಗತಿಸಿದೆ.

ಆರ್ ಎಸ್ ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಹೇಳಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್‌ ನಿರ್ಮಾಣ ಮತ್ತು ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ರಾಷ್ಟ್ರೀಯ ಸುರಕ್ಷತೆ, ಏಕತೆ-ಅಖಂಡತೆ ಮತ್ತು ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ ಸಮಾಜದ ಜೊತೆಗೆ ನಿಂತು ಸಂಘ ಯೋಗದಾನವನ್ನು ನೀಡಿದೆ. ಕಾಲ ಕಾಲಕ್ಕೆ ದೇಶದ ನೇತೃತ್ವ ವಹಿಸಿದ್ದ ವಿವಿಧ ನಾಯಕರು ಸಂಘದ ಕಾರ್ಯವನ್ನು ಶ್ಲಾಘಿಸಿದ್ದಾರೆ.

ತಮ್ಮ ರಾಜಕೀಯ ಹಿತಾಸಕ್ತಿಗಳಿಂದಾಗಿ ಆಗಿನ ಸರ್ಕಾರ, ರಾಷ್ಟ್ರೀಯ ಸ್ವಯಂಸೇವಕ ಸಂಘದಂತಹ ಸೃಜನಶೀಲ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ಅನಗತ್ಯವಾಗಿ ನಿಷೇಧಿಸಿತ್ತು. ಆದರೆ ಪ್ರಸ್ತುತ ಸರ್ಕಾರದ ನಿರ್ಧಾರವು ಸಮಯೋಚಿತವಾಗಿದೆ ಮತ್ತು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ.

– ಸುನೀಲ್ ಅಂಬೇಕರ್
ಅಖಿಲ ಭಾರತೀಯ ಪ್ರಚಾರ ಪ್ರಮುಖ್‌
ರಾಷ್ಟ್ರೀಯ ಸ್ವಯಂಸೇವಕ ಸಂಘ

ಆರ್ ಎಸ್ ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ಹೇಳಿಕೆ

Leave a Reply

Your email address will not be published.

This site uses Akismet to reduce spam. Learn how your comment data is processed.