ಮಡಿಕೇರಿ : ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕಾರಿನ ಮೇಲೆ ಗುಂಡಿನ ದಾಳಿಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.ವಿಶ್ವ ಹಿಂದೂ ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಅವರು ತಮ್ಮ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಇಲ್ಲಿನ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಬುಧವಾರ ತಡರಾತ್ರಿ ಮಡಿಕೇರಿ- ಚೆಟ್ಟಳ್ಳಿ ಮಾರ್ಗಮಧ್ಯದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಸ್ವಲ್ಪದರಲ್ಲೇ ಪಾರಾಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕೆಲಸದ ಮೇಲೆ ಚಟ್ನಳ್ಳಿ ಗ್ರಾಮಕ್ಕೆ ತೆರಳಿದ್ದ ಕೃಷ್ಣಮೂರ್ತಿ, ಕೆಲಸ ಮುಗಿಸಿ ಮತ್ತೆ ಮಡಿಕೇರಿಗೆ ಕಾರಿನಲ್ಲಿ ವಾಪಸಾಗುತ್ತಿದ್ದರು ಈ ವೇಳೆ ಅಭ್ಯಾಲ ಎಂಬ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.

ಸ್ಥಳಕ್ಕೆ ಎಸ್ಪಿ ರಾಮರಾಜನ್ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿದ್ದು, ಗುಂಡು ಹಾರಿದ ಸ್ಥಳವನ್ನು ಪರಿಶೀಲನೆ ಮಾಡಿದರು. ಬಳಿಕ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಮಾತನಾಡಿದ ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೃಷ್ಣಮೂರ್ತಿಯವರ ಮೇಲಿನ ದಾಳಿಯಲ್ಲಿ ಸ್ಥಳೀಯ ಪಿ‌ಎಫ್‌ಐ ಮತ್ತು ಎಸ್‌ಡಿಪಿ‌ಐ ಕಾರ್ಯಕರ್ತರ ಕೈವಾಡವಿದೆ ಎಂಬ ಶಂಖೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದೂಪರವಾದ ಅನೇಕ ಪ್ರಕರಣಗಳನ್ನು ಇವರು ದಾಖಲಿಸಿದ್ದು ಆರೋಪಿಗಳು ಇದರಲ್ಲಿ ಭಾಗಿಯಾದ ಕುರಿತು ಗುಮಾನಿಯಿದೆ.

Leave a Reply

Your email address will not be published.

This site uses Akismet to reduce spam. Learn how your comment data is processed.