
ಮೈಸೂರು: ‘ಪರಿದೃಶ್ಯ’ ಎರಡನೇ ವರ್ಷದ ಅಂತರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಫೆಬ್ರವರಿ 3-4, 2024 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಫೆಬ್ರವರಿ 3, 2024 ರಂದು ಬೆಳಗ್ಗೆ 10 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ. ನಟ ಪ್ರಕಾಶ್ ಬೆಳವಾಡಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಶರಣಪ್ಪ ವಿ ಹಲ್ಸೆ, ಲೇಖಕ ಕೆ ಬಿ ಗಣಪತಿ, ಮೈಸೂರು ಸಿನೆಮಾ ಸೊಸೈಟಿಯ ಅಧ್ಯಕ್ಷ ಡಾ. ಚಂದ್ರಶೇಖರ ಜಿ ಆರ್ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
#ParidrishyaFilmFest