
ಬೆಂಗಳೂರು: ಪ್ರೊ.ಪಿ.ವಿ.ಕೃಷ್ಣಭಟ್ಟರ ಕುರಿತಾದ `ಪಥದರ್ಶಿ’ ಪುಸ್ತಕ ಲೋಕಾರ್ಪಣೆ ಸಮಾರಂಭ ಇಂದು ಆಗಸ್ಟ್ 5ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಗಾಂಧಿನಗರದ ಅರಮನೆ ರಸ್ತೆಯಲ್ಲಿರುವ ಭಾರತೀಯ ಸ್ಕೌಟ್ಸ್ ಮತ್ತ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಕಚೇರಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಿರಿಯ ಪತ್ರಕರ್ತ ಹಾಗೂ ಲೇಖಕ ದು.ಗು.ಲಕ್ಷ್ಮಣ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.