ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡದಿರುವ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿಯ ಮುಖ್ಯ ಸಂಚಾಲಕಿ ವಿ.ಶಾಂತ ಕುಮಾರಿ ಪ್ರತಿಕ್ರಿಯಿಸಿ ತೀರ್ಪನ್ನು ಸ್ವಾಗತಿಸಿದ್ದಾರೆ.

ಭಾರತದ ಲಕ್ಷಾಂತರ ನಾಗರಿಕರ ಭಾವನೆಗಳಿಗೆ ಮತ್ತು ಸಾವಿರಾರು ವರ್ಷಗಳ ಭಾರತೀಯ ಸಂಸ್ಕೃತಿಯ ಮೂಲ ಚಿಂತನೆಗೆ ಪ್ರಾಮುಖ್ಯತೆಯನ್ನು ನೀಡಿರುವ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲಿಲ್ಲ. ಆದ್ದರಿಂದ, ರಾಷ್ಟ್ರ ಸೇವಿಕಾ ಸಮಿತಿಯ ಪರವಾಗಿ, ಸುಪ್ರೀಂ ಕೋರ್ಟ್ ಅನ್ನು ಅಭಿನಂದಿಸುತ್ತೇನೆ ಎಂದರು.

ಭವಿಷ್ಯದಲ್ಲಿಯೂ ಭಾರತೀಯ ಜೀವನ, ಮೌಲ್ಯಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಕಾಲಕಾಲಕ್ಕೆ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಅಭಿಪ್ರಾಯಪಟ್ಟರು

Leave a Reply

Your email address will not be published.

This site uses Akismet to reduce spam. Learn how your comment data is processed.