ಸೆಪ್ಟೆಂಬರ್ 15, 2023 ಬೆಂಗಳೂರು: ದಿಶಾಭಾರತ್ ಸಂಸ್ಥೆಯ ವತಿಯಿಂದ ನಾಲ್ಕನೇ ವರ್ಷದ ‘ನನ್ನ ಭಾರತ’ ಯುವ ಅಭಿಯಾನದ ಭಾಗವಾಗಿ ‘ಅಮೃತಕಾಲದಲ್ಲಿ ಭಾರತ – ಯುವಜನತೆಯ ಪಾತ್ರ’ ಎಂಬ ವಿಷಯದ ಕುರಿತು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹಾಸನದ ಹುಣಸಿನಕೆರೆಯ ಎ ಸೂಬಿಯ ಮೆಹಕ್ ಪ್ರಥಮ ಸ್ಥಾನವನ್ನು, ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ದ್ವಿತೀಯ ಸ್ಥಾನವನ್ನು, ಬೆಳಗಾವಿಯ ವಕ್ಕುಂದದ ಪ್ರತೀಕ್ಷಾ ಅಶೋಕ ಜಂತಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜೊತೆಗೆ ದಕ್ಷಿಣ ಕನ್ನಡದ ರಮಾ ಭಾಗೀರಥೀ, ಬಾಗಲಕೋಟೆಯ ಅಕ್ಷತಾ ಎಸ್ ಹತ್ತಳ್ಳಿ, ಹಾಸನ ಜಿಲ್ಲೆಯ ಶ್ರೇಯ ಕೆ ಆರ್, ಬಳ್ಳಾರಿಯ ಭವಾನಿ ಎಸ್, ಬೆಂಗಳೂರಿನ ಗಿರೀಶ್ ಆರ್, ಮಂಡ್ಯದ ಚಿತ್ತಾರ ಪಟೇಲ್ ಎಸ್ ಪಿ, ಮೈಸೂರಿನ ಕುಸುಮ ಸಿ ಎಂ, ವಿಜಯಪುರದ ರವಿಕುಮಾರ ಎಸ್ ದೊಡಮನಿ, ಉತ್ತರ ಕನ್ನಡದ ಅಶ್ವಿನಿ ಗಜಾನನ ಹೆಗಡೆ, ಉಡುಪಿ ರಕ್ಷಿತ ಹೆಚ್ ಒಟ್ಟು ಹತ್ತು ಮಂದಿ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನಗಳು ಲಭಿಸಿವೆ.

ಬಹುಮಾನ ವಿತರಣಾ ಸಮಾರಂಭವು ಸೆಪ್ಟೆಂಬರ್ 23, 2023 ಶನಿವಾರ ಬೆಳಗ್ಗೆ 10.30ಕ್ಕೆ ದಯಾನಂದ ಸಾಗರ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಕುಮಾರಸ್ವಾಮಿ ಲೇಔಟ್, ಬೆಂಗಳೂರು ಇಲ್ಲಿ ನಡೆಯಲಿದೆ. ಮಾಹಿತಿಗಾಗಿ: 9483150527, 9945201546, 8722552497

Leave a Reply

Your email address will not be published.

This site uses Akismet to reduce spam. Learn how your comment data is processed.