ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ತೃತೀಯ ವರ್ಷ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭ ಜೂನ್ 1 ರಂದು ನಾಗ್ಪುರದ ರೇಶೀಂಭಾಗ್ ನಲ್ಲಿ ಸಂಜೆ 6.15ಕ್ಕೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೊಲ್ಲಾಪುರದ ಕಾನೇರಿಯ ಶ್ರೀ ಸಿದ್ಧಗಿರಿ ಸಂಸ್ಥಾನ ಮಠದ ಪೂಜ್ಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆರ್ ಎಸ್ ಎಸ್ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಉಪಸ್ಥಿತರಿರಲಿದ್ದಾರೆ.