ಬಾಗಲಕೋಟೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಾಗಲಕೋಟೆ ನಗರ ವಾರ್ಷಿಕೋತ್ಸವ ಹಾಗೂ ವಿಜಯದಶಮಿ ಪ್ರಯುಕ್ತ ಬಾಗಲಕೋಟೆ ವಿದ್ಯಾಗಿರಿಯಲ್ಲಿ ಬಾಲಕರ ಆಕರ್ಷಕ ಪಥಸಂಚಲನ ನಡೆಯಿತು.
ನೂರಾರು ಜನ ಪುಟ್ಟ ಮಕ್ಕಳು ಗಣವೇಷಧಾರಿಗಳಾಗಿ ವಿದ್ಯಾಗಿರಿಯ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಮಾಡಿ ಎಲ್ಲರ ಗಮನ ಸೆಳೆದರು. ಪಥ ಸಂಚಲನ ಮಾರ್ಗದ ಇಕ್ಕೆಲಗಳಲ್ಲಿ ನೆರೆದ ಜನಸ್ತೋಮ ನೆರೆದಿತ್ತು.