
ಧಾರವಾಡ: ಪ್ರಜ್ಞಾ ಪ್ರವಾಹದ ವತಿಯಿಂದ ‘ವಚನ ದರ್ಶನ’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಜೂನ್ 29, 2024 ರಂದು ವಿದ್ಯಾಗಿರಿಯ ಜೆಎಸ್ ಎಸ್ ಕಾಲೇಜು ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಯವರು ದಿಕ್ಸೂಚಿ ಭಾಷಣ ಮಾಡಿದರು. ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪೂಜ್ಯ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಜ್ಞಾ ಪ್ರವಾಹದ ಅಖಿಲ ಭಾರತೀಯ ಸಂಯೋಜಕ ಜೆ. ನಂದಕುಮಾರ್, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ್, ಹಿರಿಯ ಸಂಶೋಧಕ ಹಾಗೂ ಭಾಷಾತಜ್ಞ ಡಾ. ಸಂಗಮೇಶ ಸವದತ್ತಿಮಠ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಾಯುಕ್ತ ಗೋವಿಂದಪ್ಪ ಗೌಡಪ್ಪಗೋಳ, ಹಿರಿಯ ಲೇಖಕಿ ಶಾಂತಾ ಇಮ್ರಾಪುರ್ ಉಪಸ್ಥಿತರಿದ್ದರು.
