ಬೆಂಗಳೂರು: ಮಹಾರಾಷ್ಟ್ರದ ಭಿಕುಜಿ ರಾಮ್ ಜಿ ಇದಾತೆ ಅವರಿಗೆ ‘ಬಸವ ಪುರಸ್ಕಾರ ರಾಷ್ಟ್ರೀಯ ಪುರಸ್ಕಾರ’, ಕೇರಳದ ಸದಾನಂದನ್ ಮಾಸ್ತರ್ ಅವರಿಗೆ ‘ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ’, ರಾಷ್ಟ್ರೋತ್ಥಾನ ಪರಿಷತ್ತಿನ ಡಾ.ಎಸ್ ಆರ್ ರಾಮಸ್ವಾಮಿ ಅವರಿಗೆ ಪಂಪ ಪ್ರಶಸ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಿದರು.





