
ಚತ್ರದುರ್ಗ: ವಿಶ್ವ ಹಿಂದೂ ಪರಿಷದ್ ವತಿಯಿಂದ ಆಯೋಜಿಸಲಾಗಿರುವ ಶೌರ್ಯ ಜಾಗರಣ ರಥಯಾತ್ರೆಯ ಉದ್ಘಾಟನಾ ಕಾರ್ಯಕ್ರಮ ಚಿತ್ರದುರ್ಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಮಾದಾರಚೆನ್ನಯ್ಯ ಸ್ವಾಮೀಜಿ, ಶ್ರೀ ಸೇವಾಲಾಲ್ ಮಹಾಸ್ವಾಮಿಗಳು ಮತ್ತು ನಾಗಾಸಾಧುಗಳು ದಿವ್ಯಸಾನಿಧ್ಯ ವಹಿಸಿದ್ದರು.


ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಜಂಟಿ ಕಾರ್ಯದರ್ಶಿ ಸ್ಥಾಣು ಮಾಲಯನ್, ಬಜರಂಗದಳ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯ ನಾರಾಯಣ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್, ವಿಶ್ವ ಹಿಂದು ಪರಿಷದ್ ಕ್ಷೇತ್ರೀಯ ಸತ್ಸಂಗ ಪ್ರಮುಖ್ ಮಹಾಬಲೇಶ್ವರ ಹೆಗಡೆ,ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ,ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ ಪಂಪ್ವೆಲ್,ಕರ್ನಾಟಕ ದಕ್ಷಿಣ ಬಜರಂಗದಳ ಸಂಯೋಜಕ ಸುನಿಲ್, ಕರ್ನಾಟಕ ದಕ್ಷಿಣ ಬಜರಂಗದಳ ಸಹ ಸಂಯೋಜಕ ಪ್ರಭಂಜನ್ ಸೂರ್ಯ, ಶೌರ್ಯ ಜಾಗರಣ ರಥಯಾತ್ರೆ ಚಿತ್ರದುರ್ಗ ಸಮಿತಿ ಅಧ್ಯಕ್ಷ ಜಿ ಎಂ ಸುರೇಶ್, ಪ್ರಾಂತ ಶೌರ್ಯ ಜಾಗರಣ ರಥಯಾತ್ರೆ ಸಮಿತಿ ಸದಸ್ಯ ಟಿ.ಬದರಿನಾಥ್ ಮತ್ತು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.


