ಬೆಂಗಳೂರು: ವಿಶ್ವ ಸಂವಾದ ಕೇಂದ್ರ ಕರ್ನಾಟಕ ಇದರ ವತಿಯಿಂದ ಬೆಂಗಳೂರಿನ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್ ನಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಸ್ತಾರ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶ್ವ ಸಂವಾದ ಕೇಂದ್ರದ ಟ್ರಸ್ಟಿಗಳಾದ ರಾಧಾಕೃಷ್ಣ ಹೊಳ್ಳ, ಆರೆಸ್ಸೆಸ್ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳ ಹಾಗೂ ಪತ್ರಿಕೆಗಳ ಪತ್ರಕರ್ತರು ಭಾಗವಹಿಸಿದ್ದರು.