ಬೆಂಗಳೂರು: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ವಿಶ್ವ ಸಂವಾದ ಕೇಂದ್ರ ಕರ್ನಾಟಕ, ಇದರ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 25ರಂದು ಬೆಳಗ್ಗೆ 10:30ರಿಂದ 12:30ರ ವರೆಗೆ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ಈ ಬಾರಿ ತಿ.ತಾ.ಶರ್ಮಾ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಜಾವಾಣಿಯ ರವಿಪ್ರಕಾಶ್ ಎಸ್, ಸುವರ್ಣ ವಾಹಿನಿಯ ಜಯಪ್ರಕಾಶ್ ಶೆಟ್ಟಿ, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಶಿವಮೊಗ್ಗದ ಅಜೇಯ ಪತ್ರಿಕೆಯ ಸಂಪಾದಕ ಎಂ. ಶ್ರೀನಿವಾಸನ್, ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಯನ್ನು ಹೊಸದಿಗಂತದ ಅಂಕಣಕಾರ ಹೆಬ್ರಿ ಬಾಲಕೃಷ್ಣ ಮಲ್ಯ, ವಿಕ್ರಮ ವಾರಪತ್ರಿಕೆಯ ಅಂಕಣಕಾರ ಕಾ. ರಮಾನಂದ ಆಚಾರ್ಯ, ವಿ.ಎಸ್.ಕೆ. ಡಿಜಿಟಲ್ ಮಾಧ್ಯಮ ಪ್ರಶಸ್ತಿಯನ್ನು ಮೀಡಿಯಾ ಮಾಸ್ಟರ್ಸ್ ಸಂಪಾದಕ ಎಂ. ಎಸ್. ರಾಘವೇಂದ್ರ ಸ್ವೀಕರಿಸಲಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಶ್ರೀನಿವಾಸ ಬಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ವಿಶ್ವ ಸಂವಾದ ಕೇಂದ್ರದ ಅಧ್ಯಕ್ಷ ಡಾ.ಶ್ರೀಧರ್ ಉಪಸ್ಥಿತರಿರಲಿದ್ದಾರೆ.

Leave a Reply

Your email address will not be published.

This site uses Akismet to reduce spam. Learn how your comment data is processed.