
ಬೆಂಗಳೂರು: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವರ್ಷಂಪ್ರತಿ ಕೊಡಮಾಡುವ ಮಾಧ್ಯಮ ಪ್ರಶಸ್ತಿಗಳು ಪ್ರಕಟವಾಗಿದೆ. 2024ನೇ ಸಾಲಿನ ಪ್ರಶಸ್ತಿ ವಿಜೇತರ ಕುರಿತು ಮಾಹಿತಿ ಇಲ್ಲಿದೆ.

ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ಏಷಿಯಾನೆಟ್ ಸುವರ್ಣನ್ಯೂಸ್ ನ ಸಂಪಾದಕ ಅಜಿತ್ ಹನಮಕ್ಕನವರ್, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಸ್ತ್ರೀಜಾಗೃತಿ ಪತ್ರಿಕೆಯ ಸಂಪಾದಕಿ ಶೋಭಾ ಎಚ್. ಜಿ., ಹೊ.ವೆ.ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಖ್ಯಾತ ಅಂಕಣಕಾರ ಪ್ರೇಮಶೇಖರ, ವಿಎಸ್ ಕೆ ಡಿಜಿಟಲ್ ಮಾಧ್ಯಮ ಪ್ರಶಸ್ತಿಗೆ ಡಾ.ಪೂರ್ವಿ ಜಯರಾಜ್ ಭಾಜನರಾಗಿದ್ದಾರೆ.





ವಿಎಸ್ ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 30, 2024 ಭಾನುವಾರ ಬೆಳಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕ ಡಾ.ಪಿ.ವಾಮನ್ ಶೆಣೈ ಉಪಸ್ಥಿತರಿರಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8722552497ಗೆ ಸಂಪರ್ಕಿಸಿ.